ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆದಿದೆ.
ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್‌ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಪಾವಂಜೆ ಮೇಳದ ಖ್ಯಾತ ಕಲಾವಿದರಾದ ರಾಧಾಕೃಷ್ಣ ನಾವಡ ಅವರನ್ನು ದೆಹಲಿ ಘಟಕದ ಪರವಾಗಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ತೆಂಕು ಬಡಗು ಕಲಾವಿದರಿಂದ ಕೀಚಕ ವಧೆ ಯಕ್ಷಗಾನ ಪ್ರದರ್ಶಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳಾದ ಪ್ರದೀಪ ಆಳ್ವ ಕದ್ರಿ, ರವಿಚಂದ್ರ ಶೆಟ್ಟಿ ಅಶೋಕನಗರ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…