ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ…!

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬ0ಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು, ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್ ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದಿದ್ದಾರೆ.

2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕ ವಿಮಾ ಪರಿಹಾರವಾಗಿ 15,95,000ರೂ. ಹಣ ಕೋರಿಕೊಂಡಿದ್ದಾರೆ. ಈ ಸಂಬ0ಧ ವಿಮಾ ಕಂಪೆನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ಆಗಿರುವುದು ಕಂಡುಬ0ದಿದೆ. ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ತನಿಖೆ ನಡೆಸಿದಾಗ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!