12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.
ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿತ್ತು ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿ0ದ, ನ್ಯಾಯಾಲಯವು ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣ ಎಂದು ಪರಿಗಣಿಸಿತ್ತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…