ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ ಎಂದು ಗುರುತಿಸಲಾಗಿದೆ.



