ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ. ವೈ.ಟಿ ರಾಘವೇಂದ್ರ ಅವರು ವಿಶೇಷ ಸರಕಾರಿ ಅಭಿಯೋಜಕರಾಗಿದ್ದು, ಇತರ ಯಾವುದೇ ನ್ಯಾಯಾಲಯ ಅಥವಾ ಬೇರೆ ಯಾವುದೇ ಪ್ರಕರಣಗಳಲ್ಲಿ ಕಕ್ಷಿಗಾರರ ಪರವಾಗಿ ಪ್ರತಿನಿಧಿಸುವಂತಿಲ್ಲ ಎಂದು ನಿರ್ಬಂಧ ಇದ್ದರೂ ಅವರು ಇತರ ನ್ಯಾಯಾಲಯಗಳಲ್ಲಿ ಹಾಗೂ ಇತರ ಪ್ರಕರಣಗಳಲ್ಲಿ ಕಕ್ಷಿಗಾರರನ್ನು ಪ್ರತಿನಿಧಿಸುತ್ತಿದ್ದಾರೆಂದು ಮಧು ಎಂಬವರು ದಾಖಲೆ ಸಹಿತ ಸರಕಾರಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲಾ ಆರೋಪಗಳಿಗೆ ವೈ.ಟಿ. ರಾಘವೇಂದ್ರ ಅವರು ನೀಡಿದ ಉತ್ತರಗಳು ಸಮಂಜಸವಲ್ಲ ಎಂದು ತೀರ್ಮಾನಿಸಿ, ಕರ್ತವ್ಯ ಲೋಪದಡಿ ಅವರ ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಹುದ್ದೆಯ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…