ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು. ಬಂಧಿತರಿಂದ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ 1,00,000 ರೂ. ಮೌಲ್ಯದ ಬೈಕ್ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.



