ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲಾದ ಘಟನೆ ಅಳಿವೆ ಬಾಗಿಲಿನಲ್ಲಿ ನಡೆದಿದೆ.

ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೋಹರ್ ಪುತ್ರನ್ ಮೃತ ವ್ಯಕ್ತಿ. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



