ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವಿಗೀಡಾಗಿದ್ದಾರೆ.
ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಕಿನ್ನಿಗೋಳಿ ಮೂಲದ ಸದ್ಯ ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ 22 ವರ್ಷದ ಸಂಸ್ಕೃತಿ ಅಮೀನ್ ಎಂದು ಗುರುತಿಸಲಾಗಿದೆ. ಸಂಸ್ಕೃತಿ ಅಮೀನ್ ಮುಂಬೈನ ಕೋಟ್ಯಾನ್ ಕ್ಯಾಟರರ್ಸ್ನ ಮಾಲೀಕರಾದ ಅನಿಲ್ ಮತ್ತು ಪದ್ಮಾವತಿ ಅಮೀನ್ ಅವರ ಏಕೈಕ ಪುತ್ರಿ. ಸಂಸ್ಕೃತಿ ಎಂದಿನಂತೆ ಬೆಳಿಗ್ಗೆ 9.30 ರ ಸುಮಾರಿಗೆ ಕೆಲಸಕ್ಕೆ ಹೋಗಲು ಮನೆಯಿಂದ ಹೊರಟಿದ್ದರು. ಅವರು ತಮ್ಮ ನಿವಾಸದಿಂದ ಕೆಲವೇ ಮೀಟರ್ ದೂರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹತ್ತಿರದ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಅವರ ತಲೆಯ ಮೇಲೆ ಬಿದ್ದಿದೆ. ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಅವರ ತಂದೆ ಅನಿಲ್ ಅಮೀನ್ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಾರೆ. ಕಟ್ಟಡದ ನಿರ್ಮಾಣದ ವೇಳೆ ಯಾವುದೇ ಸುರಕ್ಷತೆಯನ್ನು ಅವರು ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…