ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ಅನೇಕ ಹೆಣ್ಣು ಮಕ್ಕಳನ್ನು ನಾವು ಕಾಣಬಹುದಾಗಿದೆ.
ಹೀಗಿರವಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಹೆಣ್ಣು ಮಗಳೊಬ್ಬಳು ಶಿಕ್ಷಣ ಪಡೆಯಲು ನಡೆದು ಬಂದ ದಾರಿಯು ಆಶ್ಚರ್ಯಕರವಾಗಿದೆ. ತನ್ನ ಬಾಲ್ಯದಲ್ಲೇ ತನಗೆ ಬುದ್ಧಿ ಶಕ್ತಿ ಬರುವ ಮೊದಲೇ ತಂದೆಯನ್ನು ಕಳೆದುಕೊಂಡಿರುವ ಈಕೆಯ ಹೆಸರು ಸಫಿಯ ತಂದೆ ಧಾರ್ಮಿಕ ಕ್ಷೇತ್ರದಲ್ಲಿ ಗುರುಗಳಾಗಿದ್ದು, ತನ್ನ ಅಣ್ಣ ತಂದೆಯ ಆದರ್ಶದಂತೆ ಧಾರ್ಮಿಕ ಕ್ಷೇತ್ರದಲ್ಲಿ ತೊಡೆದುಕೊಂಡಿದ್ದಾರೆ. ಕಷ್ಟದ ಸಮಯದಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಸಂದರ್ಭದಲ್ಲಿ ಉತ್ತಮ ಸಂಬಂಧವನ್ನು ಮನೆಗೆ ಹುಡುಕಿಕೊಂಡು ಬಂದಾಗ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮನೆಯವರ ಆಶಯದಂತೆ ನೌಫಲ್ ಎಂಬುವರ ಜೊತೆ ವಿವಾಹವಾಗುತ್ತಾರೆ. ನಂತರ ಒಂದು ಮಗುವಿಗೆ ಜನ್ಮ ನೀಡಿ ಸುಖ ಸಂಸಾರದಲ್ಲಿ ಇರುವಾಗ ಸಫಿಯ ಎಂಬ ಹೆಣ್ಣುಮಗಳು ತನ್ನ ಗಂಡ ಹಾಗೂ ಮನೆಯವರಲ್ಲಿ ತನ್ನ ಕಲಿಕೆಯ ಕನಸನ್ನ ಹೇಳುತ್ತಾಳೆ. ಇದಕ್ಕೆ ಗಂಡನಾದ ನೌಫಲ್ ಹಾಗೂ ಅವರ ಕುಟುಂಬದವರು ಸಕಾರಾತ್ಮಕವಾಗಿ ಸ್ಪಂದಿಸಿ ತನ್ನ ಬಾಲ್ಯದ ಕನಸು ಉತ್ತಮ ವಕೀಲೆಯಾಗಬೇಕೆಂಬ ಕನಸಿಗೆ ಚಿಗುರು ಮೂಡುತ್ತದೆ ತನ್ನ ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ತನ್ನ 1 ವರ್ಷ 2 ತಿಂಗಳು ಮಗುವಿನ ಜೊತೆಗೆ ವಿವೇಕಾನಂದ ಕಾನೂನು ಕಾಲೇಜು ಪುತ್ತೂರಿನಲ್ಲಿ ಐದು ವರ್ಷದ ಕಾನೂನು ಪದವಿ ಶಿಕ್ಷಣ ಪಡೆಯಲು ಪ್ರವೇಶ ಪಡೆದು ಪ್ರಸ್ತುತ ಐದನೇ ವರ್ಷ ಪೂರ್ಣಗೊಳಿಸಿ ಕಾನೂನು ಪದವಿ ಪಡೆದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೊಂದಣಿಯಾಗಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದ್ದಾರೆ. ಹೀಗೆಯೇ ಹಲವಾರು ಹೆಣ್ಣು ಮಕ್ಕಳು ಮದುವೆಯ ನಂತರವೂ ಕೂಡ ತಮ್ಮ ಗುರಿಯನ್ನು ಸಾಧಿಸಲು ಶ್ರಮ ಪಡುತ್ತಿದ್ದಾರೆ. ಯಾವುದೇ ಹೆಣ್ಣುಮಕ್ಕಳು ತಮ್ಮ ಕನಸನ್ನು ಕನಸಾಗಿ ಮಣ್ಣು ಮಾಡುವ ಮೊದಲು ತಮ್ಮ ಹೆತ್ತವರ ಹಾಗೂ ತಮ್ಮ ಗಂಡ ಹಾಗೂ ಅವರ ಮನೆಯವರ ಬಳಿ ವ್ಯಕ್ತಪಡಿಸಿದ್ದಲ್ಲಿ ಇನ್ನೊಂದು ಸಫಿಯ ನೀವು ಆಗಬಹುದು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…