ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.

ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹಚ್ಚಿದ್ದು ಮುಂಜಾನೆ ಸುಮಾರು 3 ಗಂಟೆ ವೇಳೆ ಮನೆಯಲ್ಲಿ ಮಗು ಜೋರಾಗಿ ಆಳುತ್ತಿದ್ದಾಗ ಮನೆಮಂದಿಗೆ ಎಚ್ಚರವಾಗಿ ನೋಡಿದಾಗ ಬೆಂಕಿ ಕಾಣಿಸಿಕೊಂಡಿದೆ. ಅದಾಗಲೇ ಮನೆಯಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ ಗೋಣಿ ಚೀಲಗಳು ಮಕ್ಕಳ ಶಾಲಾ ಸಮವಸ್ತ್ರಗಳು, ಶಾಲಾ ಪಠ್ಯ ಪುಸ್ತಕಗಳು ಮತ್ತು ಮನೆಯವರ ಇತರ ಬಟ್ಟೆ ಬರೆಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟವಾಗಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿದ್ದಾರೆ.



