ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಶರಣಾಗಿದ್ದಾರೆ.

ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದರು. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅವರು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ.



