ಮಂಚಿ ಕೊಳ್ನಾಡು ಪ್ರೌಢಶಾಲೆಯು 1977ರಲ್ಲಿ ಸ್ಥಾಪನೆಗೊಂಡು 2027 ಕ್ಕೆ 50 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ. ಈ ಕಾರಣದಿಂದ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು, ಶಾಲಾ ಹಿತೈಷಿಗಳನ್ನು, ಊರಿನ ವಿದ್ಯಾಭಿಮಾನಿಗಳನ್ನು ಸೇರಿಸಿ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿ ರಚನಾ ಸಭೆಯನ್ನು ಶಾಲಾ ವತಿಯಿಂದ ಆಯೋಜಿಸಲಾಗಿತ್ತು.
ಈ ಸಂದರ್ಭ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಡಾ. ಮಮತಾ ಪಿ ಶೆಟ್ಟಿ ಮಂಚಿ, ಪ್ರಧಾನ ಕಾರ್ಯದರ್ಶಿಯಾಗಿ ಮ್ಯಾಕ್ಸಿಮ್ ಫರ್ನಾಂಡಿಸ್, ಪ್ರಧಾನ ಕೋಶಾಧಿಕಾರಿಯಾಗಿ ಉಮಾನಾಥ ರೈ ಮೇರಾವು ಹಾಗೂ ಪ್ರಧಾನ ಸಂಚಾಲಕರಾಗಿ ರಮಾನಂದ ನೂಜಿಪ್ಪಾಡಿ ಆಯ್ಕೆಗೊಂಡಿದ್ದಾರೆ. ಉಳಿದಂತೆ ಇನ್ನಷ್ಟು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೂಡ ಈ ಸಂದರ್ಭದಲ್ಲಿ ನಡೆಯಿತು. ಈ ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಮಾತನಾಡಿ, ಶಾಲೆಯ ಹಿರಿಯ ವಿದ್ಯಾರ್ಥಿಯಾಗಿ ಶಾಲೆಯ ಋಣವನ್ನು ತೀರಿಸುವ ಸದಾವಕಾಶ ಒದಗಿ ಬರುವುದು ನಮ್ಮ ಭಾಗ್ಯವಾಗಿದೆ. ಬದುಕು ಕಟ್ಟಿಕೊಟ್ಟ ಶಾಲೆಯ ಸುವರ್ಣ ಸಂಭ್ರಮಕ್ಕೆ ಎಲ್ಲರೂ ಸಾಕ್ಷಿಗಳಾಗಬೇಕು ಎಂದರು.
ಮಾರ್ಗದರ್ಶನ ಸಮಿತಿಯ ನಿವೃತ್ತ ಮುಖ್ಯ ಶಿಕ್ಷಕರಾದ ಪುರುಷೋತ್ತಮ ಟಿ ಮಾತನಾಡಿ, ಸುವರ್ಣ ಸಂಭ್ರಮವನ್ನು ಕಟ್ಟಡ ನಿರ್ಮಾಣದ ಮೂಲಕ ಅರ್ಥಪೂರ್ಣವಾಗಿ ನೆರವೇರಿಸಲು ಮುಂದಾಗಿರುವ ಎಲ್ಲಾ ಹಿರಿಯ ವಿದ್ಯಾರ್ಥಿಗಳು, ಶಾಲೆಯ ಹಿತೈಷಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು. ಶಾಲಾ ಮುಖ್ಯ ಶಿಕ್ಷಕರಾದ ಸುಶೀಲ ವಿಟ್ಲ ಸುವರ್ಣ ಸಂಭ್ರಮದ ಆಶಯ ನುಡಿಗಳನ್ನು ಆಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಾತನಾಡಿ, ಸೌಹಾರ್ಧತೆ, ಸಮಾನತೆಯನ್ನು ಸಾರುವ ಶಾಲೆ ಎಲ್ಲಾ ಸಮುದಾಯದವರ ದೇಗುಲವಾಗಿದ್ದು ಶಾಲೆಯ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಎಂದರು. ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀರಾಮಮೂರ್ತಿ, ಶಾಲಾಭಿವೃದಿ ಸಮಿತಿಯ ಸದಸ್ಯರಾದ ರಮೇಶ್ ರಾವ್ ಪತ್ತುಮುಡಿ, ಗಣೇಶ್ ಪ್ರಭು, ಸುಲೈಮಾನ್ ಜಿ ಸುರಿಬೈಲು, ಗಿರೀಶ್ ಗೌಡ ಮತ್ತು ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರ್ವಹಣೆ ಮಾಡಿ ವಂದಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…