ಮುಂಬೈನಿಂದ ವಿಮಾನದ ಮೂಲಕ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್‌ಎಫ್ ಜವಾನರು ವಶಕ್ಕೆ ಪಡೆದು ಬಜ್ಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಸ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್ ನ ಚೆಕ್- ಇನ್ ಬ್ಯಾಗೇಜ್‌ನಲ್ಲಿ ಸುಮಾರು 512 ಗ್ರಾಂ ಹೈಡೋಪೋನಿಕ್ ಗಾಂಜಾ ಪತ್ತೆಯಾಗಿದ್ದು. ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್‌ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…