ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಿಸಿರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಪು ಎಂಬಲ್ಲಿ ನಡೆದಿದೆ.

ಮೃತರನ್ನು ಬೋಳಂತೂರು ನಿವಾಸಿ ಜಬ್ಬಾರ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಜಬ್ಬಾರ್ ಅವರು ಗಾಣದಪಡ್ಪು ಶಿವಗಣೇಶ್ ಬ್ಯಾಟರಿ ಅಂಗಡಿಯ ಕಾರ್ಮಿಕನಾಗಿದ್ದು, ಗಾಣದಪಡ್ಪು ಹೆದ್ದಾರಿಯ ಬದಿಯಲ್ಲಿ ಕಾರೊಂದಕ್ಕೆ ಹಾರ್ನ್ ಅಳವಡಿಸುತ್ತಿದ್ದ ವೇಳೆ ವೇಣೂರು ಮೂಲದ ವ್ಯಕ್ತಿಯೋರ್ವ ಬಂಟ್ವಾಳ ಬೈಪಾಸ್ ಕಡೆಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಬ್ಬಾರ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಂತಾಜನಕ ಸ್ಥಿತಿಯಲ್ಲಿದ್ದ ಜಬ್ಬಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.



