ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಗೆ ತಾಗಿಕೊಂಡಿರುವ ಪುದು ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿಗಾಗಿ ಕೋಡಿ ಮಜಲು ತೇವು ಎಂಬಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದ್ದು ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ, ಅಂದುಕೊಂಡಂತೆ ಬಾಕಿ ಉಳಿದಿರುವ ಸಣ್ಣ ಪುಟ್ಟ ಕಾಮಗಾರಿಗಳು ನಡೆದರೆ ನವೆಂಬರ್ ತಿಂಗಳಲ್ಲಿ ಘಟಕದ ಉದ್ಘಾಟನೆಯಾಗಲಿದೆ.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗ್ರಾಮಪಂಚಾಯತ್ ಆಗಿರುವುದರಿಂದ ಇಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಕಷ್ಟದ ಕೆಲಸವಾಗಿದೆ, ಜೊತೆಗೆ ಹೆದ್ದಾರಿ ಬದಿಯಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆಯಲಾಗುತ್ತಿದ್ದು, ಕಸ ಎಸೆಯುವುದನ್ನು ತಡೆಯುವ ದೃಷ್ಟಿಯಿಂದ ಮತ್ತು ಸ್ವಚ್ಚತಾ ಕಾರ್ಯದ ಬಗ್ಗೆ ಗ್ರಾಮ ಪಂಚಾಯತ್ ವಿಶೇಷ ಅಭಿಯಾನದ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿತ್ತಾದರೂ ಸಂಪೂರ್ಣ ತ್ಯಾಜ್ಯ ಮುಕ್ತವಾದ ಗ್ರಾಮವನ್ನಾಗಿ ಮಾಡುವ ಉದ್ದೇಶದಿಂದ ಕೋಡಿಮಜಲು ತೇವು ಎಂಬಲ್ಲಿ ಘಟಕ ನಿರ್ಮಾಣ ಮಾಡಲಾಗಿದೆ.

ಇನ್ನೇನು ತಿಂಗೊಳಗೆ ಸಕಲ ವ್ಯವಸ್ಥೆಯ ಸಂಪೂರ್ಣ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯದ ವಿಲೇವಾರಿ ಮಾಡುವ ಬಗ್ಗೆ ಇಲ್ಲಿನ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ರುಕ್ಸಾನಾ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಸೇರಿದಮತೆ ಮತ್ತಿತರು ಉಪಸ್ಥಿತರಿದ್ದರು.



