ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ನೀಡಿ ಗೌರವಿಸಲಿದೆ.
ಇವರು ಕಳೆದ ಮೂರು ದಶಕಗಳಿಂದ ಯಕ್ಷಗಾನ ರಂಗದಲ್ಲಿ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಿಷ್ಣು, ಜಾಬಾಲಿ ಮೊದಲಾದ ಸಾತ್ವಿಕ ಪಾತ್ರಗಳನ್ನು ನಿರ್ವಹಿಸಿ, “ಮಾನಿಷಾದ” ಪ್ರಸಂಗದ ಶ್ರೀ ರಾಮನ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಹೊಂದಿರುವ “ಯಕ್ಷ ರಾಮ” ಬಿರುದು ಪಡೆದ ಸರಳ ಸಜ್ಜನಿಕೆಯ ಕಲಾವಿದರಾಗಿದ್ದಾರೆ. ಕಟೀಲು ಮೇಳದಲ್ಲಿ ಕಲಾ ಜೀವನ ಆರಂಭ ಮಾಡಿ ಒಂದೂವರೆ ದಶಕ ಸೇವೆ ಸಲ್ಲಿಸಿ, ಬಪ್ಪನಾಡು, ಸುಂಕದಕಟ್ಟೆ ಮೇಳಗಳಲ್ಲಿ ತಿರುಗಾಟ ಅನುಭವ ಪಡೆದವರು. ಪಟ್ಲ ಭಾಗವತರ ನೆಚ್ಚಿನ ಕಲಾವಿದನಾಗಿ ಬೆಳೆದು ಪಾವಂಜೆ ಮೇಳದಲ್ಲಿ ಕಲಾ ಯಾನ ಮುಂದುವರಿಸುತ್ತಿರುವ ಇವರು ಹಲವಾರು ಯಕ್ಷಗಾನ ಬಯಲಾಟ, ತಾಳಮದ್ದಳೆ, ಗಾನ -ನಾಟ್ಯ ವೈಭವಗಳನ್ನು ಸಂಯೋಜಿಸಿದ್ದಾರೆ. ನಿರೂಪಕರಾಗಿಯೂ ಜನಪ್ರಿಯತೆ ಗಳಿಸಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ ಹಲವು ದಶಕ ಗಳ ಕಾಲ ಇತಿಹಾಸ ಪ್ರಸಿದ್ದ ಸಂಪ್ರದಾಯಿಕ ಕದ್ರಿ ಕಂಬಳವನ್ನು ಸಂಘಟಿಸಿದ್ದ ಹಿರಿಯ ಹವ್ಯಾಸಿ ಅರ್ಥಧಾರಿ ಸ್ವಗ್ಗೀðಯ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 4 ರಂದು ಕದ್ರಿ ದೇವಸ್ಥಾನದಲ್ಲಿ ಪಾವಂಜೆ ಮೇಳದ ಸೇವೆ ಬಯಲಾಟ “ಛಾಯಾ ನಂದನ” ನೂತನ ಪ್ರಸಂಗ ಪ್ರದರ್ಶನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಹಾಗೂ ಪ್ರದೀಪ್ ಆಳ್ವ ಕದ್ರಿ ತಿಳಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…