ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದ್ದು. ಮೃತ ಯುವತಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ, ಯುವಕ ವಲಸೆ ಕಾರ್ಮಿಕ ಮಲ್ಲೇಶ ಎಂದು ತಿಳಿದುಬಂದಿದೆ. ನಗರ ಪೋಲಿಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೋಲಿಸ್ ಇಲಾಖೆಗೆ ನೆರವು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…