ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್ ಅವರಿಗೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ಅವರ ಮುಖಾಂತರ ಕಾರ್ಕಳದ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಮನವಿಯನ್ನು ಸಲ್ಲಿಸಲಾಯಿತು.

ನಮ್ಮ ಮನವಿಗೆ ಸ್ಪಂದಿಸಿ ಶ್ರೀ ಐವನ್ ಡಿಸೋಜಾರವರು ಕೂಡಲೆ ಗ್ರಹ ಸಚಿವರಿಗೆ ಕರೆ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿದರು. ತಕ್ಷಣ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮತ್ತು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಶ್ರೀ ಉದಯ್ ಜಿ ಆಚಾರ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅರ್ಚನಾ ಆಚಾರ್ಯ ಮತ್ತು ಸಮಾಜದ ಇತರ ವ್ಯಕ್ತಿಗಳು ಉಪಸ್ಥಿತರಿದ್ದರು.



