ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿ ಮಹಿಳೆಯರು, ಮಕ್ಕಳು ಅಸ್ವಸ್ಥರಾಗಿದ್ದಾರೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ ಆಯೋಜನೆಯಾಗಿತ್ತು.

ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಜನ ಅಸ್ವಸ್ಥರಾಗಿದ್ದಾರೆ.



