ಜನ ಮನದ ನಾಡಿ ಮಿಡಿತ

Advertisement

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ.

ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ, ಗಾಯಕ ಗಾಯಕಿಯರಿಂದ ಸಂಗೀತ ಸುಧೆ, ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ ಗಡಿನಾಡ ಯಕ್ಷ ಕವಿ ಪಾರ್ತಿಸುಬ್ಬ ವಿರಚಿತ ಶ್ರೀ ಕೃಷ್ಣ ಬಾಲಲೀಲೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ರಾತ್ರಿ ಎಂಟು ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಅಧ್ಯಕ್ಷರಾದ ಸೋಮನ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕರ್ನಾಟಕ ರಾಜ್ಯ ಹೆಲ್ತ್ ಕೌನ್ಸಿಲ್ ನ ಅಧ್ಯಕ್ಷರಾದ ಡಾ.ಯು.ಟಿ.ಇಪ್ತಿಕಾರ್ ಅಲಿ, ಕಾಸರಗೋಡಿನ ಶಾಸಕರಾದ ಎನ್.ಎ ನೆಲ್ಲಿಕುನ್ನು, ಮಂಜೇಶ್ವರದ ಶಾಸಕರದ ಎ.ಕೆ.ಎಂ.ಅಶ್ರಪ್ ಮತ್ತು ಊರಿನ ಹಾಗೂ ಯುಎಇ ಉದ್ಯಮಿಗಳು ಉಪಸ್ಥಿತರಿರುವರು.

ಸಾಮಾಜಿಕ ಕೈಂಕರ್ಯಗಳನ್ನು ಮಾಡಿಕೊಂಡು ಬಂದಿರುವ ಮಂಗಳೂರಿನ ಉದ್ಯಮಿ ಕಟಪಾಡಿ ಸತ್ಯೆಂದ್ರ ಪೈ,ಕ್ರೀಯೆಟಿವ್ ಕ್ಯಾಟರ್ ಹಾಸ್ಪಿಟಲಿಟಿನ ಆಡಳಿತ ನಿರ್ದೇಶಕರಾದ ಮಂಜುನಾಥ ರಾಜನ್, ಕರ್ನಾಟಕ ಜಾನಪದ ಪರಿಷತ್ ಒಮಾನ್‌ನ ಅಧ್ಯಕ್ಷರಾದ ಶಿವಾನಂದ ಕೋಟ್ಯಾನ್ ಕಟಪಾಡಿ ಇವರಿಗೆ ಸಾಧಕ ಗೌರವ ಪ್ರಶಸ್ತಿ ನೀಡಲಾಗುವುದು. ಸಾಧಕ ಸಂಸ್ಥೆ ದುಬೈನಲ್ಲಿ ಕಳೆದ ಹಲವಾರು ವರ್ಷಗಳಿಂದ ಕನ್ನಡದ ವಿದ್ಯಾರ್ಥಿಗಳಿಗೆ ನಮ್ಮ ಮಾತೃ ಭಾಷೆಯ ಕಲಿಕಾ ತರಗತಿಯನ್ನು ಉಚಿತವಾಗಿ ನೀಡುತ್ತಿರುವ “ಕನ್ನಡ ಪಾಠ ಶಾಲೆ ದುಬೈ” ಸಂಸ್ಥೆಯನ್ನು ಗೌರವಿಸಲಾಗುವುದು. ಇನ್ನು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಾಲ್ಕು ಮಂದಿ ಸಾಧಕರಾದ ಉದ್ಯಮಿ ಪ್ರಕಾಶ್ ಕುಂಪಲ, ಬಿ.ಎಂ ಗ್ರೂಪ್ ಮತ್ತು ರೇಡಿಯೋ ಜಿಲ್ಲಿನ ಆಡಳಿತ ನಿರ್ದೇಶಕರಾದ ಡಾ.ಕನಕರಾಜ್, ಹೋಟೆಲ್ ಉದ್ಯಮಿ ಸಂದೀಪ್ ಶೆಟ್ಟಿ, ಮ್ಯಾಕ್ಸ್ ಕ್ಯಾರ್ ಕ್ಲಿನಿಕ್ ದುಬೈ ಆಡಳಿತ ನಿರ್ದೇಶಕರಾದ ಬಶೀರ್ ಕಿನ್ನಿಂಗಾರ್ ರವರನ್ನು “ಗಡಿನಾಡ ರತ್ನ -2025” ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!