ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್‌ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…