ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.

ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ ವಾಸದ ಮನೆ ಬಿದ್ದು, ಸಂಪೂರ್ಣ ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಗೂ ನಷ್ಟದ ಬಗ್ಗೆ ಮಾಹಿತಿ ನೀಡಿದ್ದಾರೆ.



