ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.
ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ಕೃತಿಯನ್ನು ಮಂಗಳೂರು ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಂಡ ಕೃತಿ ಸೋಮಯ್ಯ ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಕಟ್ಟುವ ಹಾಗೆ ಬಿ. ಕೆ. ಗಣೇಶ್ ರೈ ಯವರು ಕಟ್ಟಿಕೊಟ್ಟಿದ್ದಾರೆ. ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ ಈ ಕೃತಿಯನ್ನು ಓದುವ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಇನ್ನು ಈ ಸಂದರ್ಭದಲ್ಲಿ ಕೃತಿಯ ಲೇಖಕ ಮತ್ತು ವಿನ್ಯಾಸಗಾರ, ಅಮೃತ ಪ್ರಕಾಶದ ಉಪಸಂಪಾದಕ ಬಿ. ಕೆ.ಗಣೇಶ್ ರೈ, ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಡಾ. ಪ್ರಿಯಾ ಹರೀಶ್ ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…