ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್‌ನಲ್ಲಿ ನಡೆದಿದೆ.

ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕನಾಗಿದ್ದು, ಈತನ ಸ್ನೇಹಿತರಾದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡವರು. ಕಾರ್ತಿಕ್ ಹಾಗೂ ಈತನ ನಾಲ್ಕು ಮಂದಿ ಸ್ನೇಹಿತರು ಮಂಗಳೂರಿನ ಖಾಸಗಿ ಕಂಪೆನಿಯೊಂದರ ಇಂಟರ್‌ವ್ಯೂಗೆಂದು ಆಗಮಿಸಿದ್ದಾರೆ. ಬಂದ ಕೆಲಸ ಮುಗಿಸಿ ವಾಪಸು ಊರಿಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್‌ನ ಮೇಲ್ಸೇತುವೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂಣ ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಚಾಲಕ ಸಹಿತ ಐದು ಮಂದಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ತಿಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



