ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್‌ನಲ್ಲಿ ನಡೆದಿದೆ.

ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕನಾಗಿದ್ದು, ಈತನ ಸ್ನೇಹಿತರಾದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡವರು. ಕಾರ್ತಿಕ್ ಹಾಗೂ ಈತನ ನಾಲ್ಕು ಮಂದಿ ಸ್ನೇಹಿತರು ಮಂಗಳೂರಿನ ಖಾಸಗಿ ಕಂಪೆನಿಯೊಂದರ ಇಂಟರ್‌ವ್ಯೂಗೆಂದು ಆಗಮಿಸಿದ್ದಾರೆ. ಬಂದ ಕೆಲಸ ಮುಗಿಸಿ ವಾಪಸು ಊರಿಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್‌ನ ಮೇಲ್ಸೇತುವೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂಣ ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಚಾಲಕ ಸಹಿತ ಐದು ಮಂದಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ತಿಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!