ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದ ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಸಂಬಂಧಿಸಿ ಒಟ್ಟು 7 ವಲಯಗಳ ಪೈಕಿ 1ನೇ ವಲಯದ ಕಾಮಗಾರಿಯ ಪ್ರಗತಿ ಎಲ್ಲರಿಗೂ ತೃಪ್ತಿ ತಂದಿದೆ. 2ನೇ ವಲಯದ ಕಾಮಗಾರಿ ಪೂರ್ತಿಗೊಳಿಸಲು ಸಮಯಾವಕಾಶ ನೀಡಲಾಗಿದೆ, ಪುರಸಭಾ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಈಗಾಗಲೇ ಅನುದಾನ ಬಿಡುಗಡೆಗೊಂಡಿದ್ದು, ಜಾಗದ ಸಮಸ್ಯೆಗಳನ್ನು ಸರಿ ಮಾಡುವುದಕ್ಕೆ ತಹಶೀಲ್ದಾರ್‌ಗೆ ಸೂಚನೆ ನೀಡಲಾಗಿದೆ. ಒಟ್ಟು ಕಾಮಗಾರಿಯನ್ನು 45 ಕೋ.ರೂ. ಹಾಗೂ 14.5 ಕೋ.ರೂ.ಗಳ ಎರಡು ವಿಭಾಗ ಮಾಡಿದ್ದೇವೆ. ಒಟ್ಟು 7 ವೆಟ್‌ವೆಲ್‌ಗಳ ಪೈಕಿ 5 ವೆಟ್‌ವೆಲ್‌ಗಳನ್ನು ಪೂರ್ತಿಗೊಳಿಸಲಾಗುತ್ತದೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…