ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್‌ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್‌ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…