ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ ಮೆಸ್ಕಾಂ ಭವನದಲ್ಲಿ ನಡೆದಿದೆ.
ಪ್ರಭಾರ ಎಕ್ಸಿಕ್ಯುಟಿವ್ ಎಂಜಿನಿಯರ್ ಸಂತೋಷ್ ನಾಯಕ್ ಆಗಮಿಸಿದ ಬಳಕೆದಾರರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಅಹವಾಲುಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಬಳಕೆದಾರರ ಪರವಾಗಿ ಮಾತನಾಡಿದ ಲಕ್ಷ್ಮೀನಾರಾಯಣ ಬಂಟ್ವಾಳ, ಮೆಸ್ಕಾಂ ಸಾರ್ವಜನಿಕರಿಂದ ಎಲ್ಲವನ್ನೂ ಪಡೆಯುತ್ತಿದೆ, ಆದರೆ ಸಾರ್ವಜನಿಕರಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿ, ಕಚೇರಿಗೆ ಆಗಮಿಸುವವರಲ್ಲಿ ಯಾರು ಕಾಯಂ, ಯಾರು ಗುತ್ತಿಗೆ ನೌಕರರು ಎಂದು ಗೊತ್ತಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಗಮಿಸುತ್ತಿಲ್ಲ. ಸಾರ್ವಜನಿಕರ ದುಡ್ಡಿಗೆ ನ್ಯಾಯ ದೊರಕುತ್ತಿಲ್ಲ. ನಿವೃತ್ತರ ಪಿಂಚಣಿಗೂ ಜನರ ದುಡ್ಡನ್ನು ಪಡೆಯಲಾಗುತ್ತಿದೆ. ಒಂದು ಸಿಬ್ಬಂದಿಗೆ ಎರಡೆರಡು ಕೆಲಸ ಕೊಡಲಾಗುತ್ತಿದೆ. ಸರಕಾರದ ಮಾರ್ಗಸೂಚಿ ಪ್ರಕಾರ, ಕೆಇಆರ್ ಸಿಗೆ ಅಫಿದವಿತ್ ಕೊಟ್ಟಂತೆ ಕೆಲಸ ಮಾಡಿ, ಸರಕಾರದ ದುಡ್ಡು ಪೋಲಾಗದಂತೆ ನೋಡಿಕೊಳ್ಳಿ ಎಂದರು. ಇನ್ನು ಈ ಸಂದರ್ಭದಲ್ಲಿ ನಾರಾಯಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಪ್ರಭಾರ ಅಕೌಂಟ್ಸ್ ಆಫೀಸರ್ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…