ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ, ಮಗ ಹರೀಶ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ…
ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ…