ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ಘಾಟ್ ತಿರುವಿನಲ್ಲಿ ವಾಹನ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…