ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿಯು. ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ ಎಂದು ಗುರುತಿಸಲಾಗಿದೆ. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ. ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್‌ಐಆರ್ ದಾಖಲಾಗಿದೆ.



