ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ.
ಪುತ್ತೂರು ಬೆಟ್ಟಂಪಾಡಿ ನಿವಾಸಿ ಮಹಮ್ಮದ್ ಮನ್ಸೂರ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಬಿಸಿಲೆ ಘಾಟ್ ಘಾಟ್‌ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ವ್ಯಕ್ತಿಯಾದ ಮಹಮ್ಮದ್ ಮನ್ಸೂರು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…