ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ ವಿಭಾಗದಲ್ಲಿ ಮಾಧ್ಯಮ ಲೋಕದ ಸಾಧಕಿಯಾಗಿ ಗುರುತಿಸಿಕೊಂಡಿರುವ ಅಭಿಮತ ವಾಹಿನಿಯ ಆಡಳಿತ ಪಾಲುದಾರರಾಗಿರುವ ಡಾ. ಮಮತಾ ಪಿ ಶೆಟ್ಟಿಯವರು ಮುಡಿಗೇರಿಸಿಕೊಂಡಿದ್ದಾರೆ.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಅಗ್ರಮಾನ್ಯ ಸೇವೆಯನ್ನು ಸಲ್ಲಿಸಿದ ಸಾಧಕರಿಗೆ ನೀಡುವ ಜಿಲ್ಲಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು , ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರಶಸ್ತಿಯನ್ನು ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಸಭಾ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಹಿತ ಮುಂತಾದ ಪ್ರಮುಖ ಗಣ್ಯರು ಉಪಸ್ಥಿತತರಿದ್ದರು.
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…