ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ ಎಂದು ಗುರುತಿಸಲಾಗಿದೆ. ಸುಮಾರು 15 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರದಿಂದ ಹೆದ್ದಾರಿ ಮೂಲಕ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇಗುಲದೆಡೆಗೆ ಕಾಲ್ನಡಿಗೆ ಮೂಲಕ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯರು ತತ್ ಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. ಮತ್ತೋರ್ವ ಅಯ್ಯಪ್ಪ ವ್ರತಧಾರಿಗೂ ತೀವ್ರ ಸ್ವರೂಪದ ಗಾಯಗಳಾಗಿವೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…