2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದಿದ್ದಾರೆ.
ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದ್ದು. ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…