ಬಜ್ಪೆ ಬಳಿ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದೆ.
ಮದರಸದಿಂದ ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಜ್ಪೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಈ ಘಟನೆ ನಡೆದಿದೆ. ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಗಾಯಗೊಂಡ ಬಾಲಕ. ಬೆಳಗ್ಗೆ ಸುಮಾರು 7:30 ಕ್ಕೆ ಬಜ್ಪೆ ಸೌಹಾರ್ದ ನಗರ ಎಂಬಲ್ಲಿ ಅಹಿಲ್ ಮದರಸದಿಂದ ಮನೆಗೆ ಹಿಂತಿರುಗುವಾಗ ಬೀದಿ ನಾಯಿ ಬಂದು ಆತನ ಮೇಲೆ ದಾಳಿ ಮಾಡಿದೆ. ಬೀದಿ ನಾಯಿಗಳು ಮಗುವಿನ ಕೆನ್ನೆ, ಕೈಗೆ ಕಚ್ಚಿ ಗಂಭೀರ ಗಾಯಗಳಾಗಿವೆ.
ಘಟನೆ ಮನೆಯ ಮುಂಭಾಗದ ರಸ್ತೆಯಲ್ಲಿ ನಡೆದಿದ್ದು, ಬಾಲಕನ ಬೊಬ್ಬೆ ಕೇಳಿ ಹೊರಬಂದ ತಾಯಿ ಪುತ್ರನನ್ನು ರಕ್ಷಿಸಿದ್ದಾರೆ. ತಕ್ಷಣವೇ ಬಜ್ಪೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಮಾತನಾಡಿದ ಬಾಲಕನ ಮಾವ ಮುಹಮ್ಮದ್ ಮುಝಮ್ಮಿಲ್, ಬೀದಿನಾಯಿಗಳ ಕಾಟ ಮತ್ತು ದಾಳಿಯಿಂದ ರಕ್ಷಣೆ ನೀಡುವಂತೆ ಕಳೆದ ಮೂರು ವರ್ಷಗಳಿಂದ ಕಂದಾವರ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮವಹಿಸಿಲ್ಲ. ಕೇಳಿದರೆ ಬೀದಿ ನಾಯಿಗಳನ್ನು ಕೊಲ್ಲದಂತೆ ನ್ಯಾಯಾಲಯದ ಆದೇಶ ಇದೆ ಎಂದು ಹೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…