ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ಬಾಲಕ ಗಗನ್ ಸ್ಥಳೀಯ ಶಾಲೆಯ ವಿದ್ಯಾರ್ಥಿಯಾಗಿದ್ದು, ಪೋಷಕರಾದ ತಂದೆ-ತಾಯಿ ಹಾಗೂ ಇಬ್ಬರು ಸಹೋದರ-ಸಹೋದರಿಯರೊಂದಿಗೆ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯಲ್ಲಿ ವಾಸವಾಗಿದ್ದನು. ಪೋಷಕರು ಶಾಲೆಗೆ ತೆರಳಿ ಮಗನ ವಿದ್ಯಾಭ್ಯಾಸದ ಪ್ರಗತಿ ಕುರಿತು ವಿಚಾರಿಸಿದಾಗ, ಆತನ ಕಲಿಕಾ ಪ್ರಗತಿ ತೃಪ್ತಿಕರವಾಗಿಲ್ಲವೆಂಬ ಮಾಹಿತಿ ದೊರೆತಿತ್ತು. ಮನೆಗೆ ಮರಳಿದ ಬಾಲಕ ಆಟವಾಡಿ ಬಳಿಕ ತನ್ನ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾನೆ. ಕೆಲವು ಸಮಯದ ಬಳಿಕ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಪೋಷಕರು ಬಲವಂತವಾಗಿ ಬಾಗಿಲು ತೆರೆಯಲು ಪ್ರಯತ್ನಿಸಿದಾಗ, ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ತಕ್ಷಣ ಆತನನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯಾಧಿಕಾರಿಯವರು ಪರೀಕ್ಷಿಸಿ ಆತ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…