ಕರಾವಳಿ

ಮಂಗಳೂರು: ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ..!

ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ನಡೆಯಲಿದೆ.

ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು 1912ರ ಫೆ.21ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾಮಾಜಿಕ ಧಾರ್ಮಿಕ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಈ ಐತಿಹಾಸಿಕ, ಅಪೂರ್ವ ದಿನದ ಹಿನ್ನಲೆಯಲ್ಲಿ 2026ರ ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಗಳು, ರಾಜಕೀಯ ಮುಖಂಡರೂ ಆದ ಪದ್ಮರಾಜ್ ಆರ್ ಪೂಜಾರಿ ತಿಳಿಸಿದ್ದಾರೆ. ಅವರು ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಹಿಂದುಳಿದ ವರ್ಗಕ್ಕೆ ಬದುಕಿನ ಹೊಸತನದ ಹಾದಿಯನ್ನು ತೋರಿಸಿಕೊಟ್ಟವರು.

ಗುರುಗಳ ಕ್ರಾಂತಿಕಾರಿ ನಿರ್ಧಾರದಿಂದ ಇಂದು ಹಿಂದುಳಿದ ವರ್ಗದ ಜನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಇದರ ನೆನಪು ಮಾಡುವುದರೊಂದಿಗೆ ಫೆಬ್ರವರಿಯಲ್ಲಿ ನಡೆಯುವ ಸಮಾವೇಶ ಐತಿಹಾಸಿಕ ಕಾರ್ಯಕ್ರಮ ವಾಗಲಿದೆ ಎಂದರು. ಇನ್ನು ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಜೈರಾಜ್ ಸೋಮಸುಂದರಂ, ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿಗಳಾದ ಸಂತೋಶ್ ಪೂಜಾರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

13 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

14 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

18 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago