ಕರಾವಳಿ

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಹೊಂದಿದ್ದ ವ್ಯಕ್ತಿಯ ಬಂಧನ….!

ಮಾರಾಟ ಮಾಡುವ ಉದ್ದೇಶದಿಂದ ನಿಷೇಧಿತ ಅಮಲು ಪದಾರ್ಥಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಸೋಂಕರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 58,650 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಲಾಗಿದೆ. 1,173 ಪ್ಲಾಸ್ಟಿಕ್ ಸ್ಯಾಚೆಟ್‌ಗಳಲ್ಲಿ ಗಾಂಜಾ ಪದಾರ್ಥವನ್ನು ಹೊಂದಿದ್ದು, ಒಟ್ಟು 6.590 ಕೆ.ಜಿ.ಗಾಂಜಾ ಉಂಡೆಗಳನ್ನು ಪತ್ತೆಹಚ್ಚಿ ಎನ್.ಡಿ.ಪಿ.ಎಸ್ ಕಾಯಿದೆ 1985 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬಿ.ಸಿ.ರೋಡಿನ ಸೋಮಯಾಜಿ ಆಸ್ಪತ್ರೆ ಸಮೀಪದ ರೈಲ್ವೆ ಹಳಿಯಲ್ಲಿ ಗಿರಾಕಿಗಳಿಗೆ ನೀಡುವ ಉದ್ದೇಶದಿಂದ ಅಲೆದಾಡುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಪೋಲೀಸರು ದಾಳಿ ನಡೆಸಿದ್ದಾರೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದಂತೆ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಹಾಗೂ ಬಂಟ್ವಾಳ ಉಪ ಅಧೀಕ್ಷರ ಮಾರ್ಗದರ್ಶನದಂತೆ ಬಂಟ್ವಾಳ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ ಹಾಗೂ ಪೇದೆಯವರಾದ ಪ್ರಕಾಶ್ ಬಸವರಾಜ್, ಶ್ರೀನಿವಾಸ ಅವರು ಕಾರ್ಯಚರಣೆ ನಡೆಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

13 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

14 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

18 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago