ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯಕ್ಷಗಾನ ಕವಿ, ವಿಮರ್ಶಕ ಗಣೇಶ ಕೊಲೆಕಾಡಿ ನಿಧನ….!

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕವಿ, ವಿಮರ್ಶಕ ಗಣೇಶ ಕೊಲೆಕಾಡಿ ಮುಲ್ಕಿ ಸಮೀಪದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು, ಹಾಗೂ ಛಂದಸ್ಸನ್ನು ಡಾ.ಶಿಮಂತೂರು ನಾರಾಯಣ ಶೆಟ್ಟಿ ಅವರಲ್ಲಿ ಅಭ್ಯಾಸ ಮಾಡಿದ್ದ ಗಣೇಶ ಕೊಲೆಕಾಡಿ ಸುಮಾರು 50ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನದಲ್ಲಿ ಬಳಕೆಯಾಗಿರುವ ಛಂದಸ್ಸಿನ ವೈಶಿಷ್ಟ್ಯದ ಕುರಿತು ವಿದ್ವತ್ತೂರ್ಣವಾಗಿ ಮಾತನಾಡಬಲ್ಲವರಾಗಿದ್ದ ಗಣೇಶ್, ತಮ್ಮ ಮನೆಯಲ್ಲೇ ಆಸಕ್ತರಿಗೆ ಛಂದಸ್ಸಿನ ಸೂಕ್ಷ್ಮತೆಗಳನ್ನು ವಿವಿಧ ಮಟ್ಟುಗಳನ್ನು ತಿಳಿಸಿಕೊಟ್ಟು ಬಹುಸಂಖ್ಯೆಯಲ್ಲಿ ಭಾಗವತರನ್ನು ರೂಪಿಸಿದ ಹೆಗ್ಗಳಿಕೆ ಹೊಂದಿದ್ದಾರೆ.

ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ರು. ತಾಯಿಯೊಂದಿಗೆ ಮುಲ್ಕಿ ಬಳಿಯ ಮೈಲೊಟ್ಟು ಎಂಬಲ್ಲಿ ವಾಸವಾಗಿದ್ದ ಅವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2014ರಲ್ಲಿ ಮನೆಯೊಂದನ್ನು ನಿರ್ಮಿಸಿಕೊಟ್ಟಿತ್ತು. ಯಕ್ಷಗಾನ ಕಲಾರಂಗ ಅವರ ನಿರ್ದೇಶನದಲ್ಲಿ ಭಾಗವತಿಕೆಯ ಕಮ್ಮಟವನ್ನು ಸಹ ಆಯೋಜಿಸಿತ್ತು.

 

ಗಣೇಶ ಕೊಲೆಕಾಡಿ ಅವರಿಗೆ ಯಕ್ಷಗಾನ ಕಲಾರಂಗ ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಗಣೇಶ ಕೊಲೆಕಾಡಿ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!