ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ …!

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಬೃಹತ್ ವಿಶ್ವ ಗೀತೋತ್ಸವದ ಉದ್ಘಾಟನಾ ಸಮಾರಂಭ ನಡೆದಿದೆ.

ಪುತ್ತಿಗೆ ಪರ್ಯಾಯ ಶ್ರೀ ಮಠದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಕ್ಕೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಚಾಲನೆ ನೀಡಿದ್ದಾರೆ. ಬಳಿಕ ಆಶೀರ್ವಚನ ನೀಡಿದ ಅವರು ಇಡೀ ಜಗತ್ತಿಗೆ ಕರ್ತವ್ಯ ಪ್ರಜ್ಞೆಯನ್ನು ಭಗವದ್ಗೀತೆ ಬೋಧಿಸಿದೆ. ಅದು ನಮ್ಮ ಜೊತೆಗಿದ್ದಾಗ ನಮ್ಮ ಕಷ್ಟಗಳು ದೂರವಾಗುತ್ತವೆ ಎಂದಿದ್ದಾರೆ. ಸಾಗರದಾಚೆಯ ದೇಶಗಳಲ್ಲಿ ಗೀತಾ ಪ್ರಸಾರ ಮಾಡಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಆಚಾರ್ಯ ಮಧ್ವರು ಉಪದೇಶಿಸಿದ ಕಾರ್ಯ ಮಾಡುತ್ತಿದ್ದಾರೆ ಎಂದು ಪುತ್ತಿಗೆ ಶ್ರೀಗಳ ಕಾರ್ಯವನ್ನು ಕೊಂಡಾಡಿದ್ದಾರೆ.

ಪರ್ಯಾಯ ಪುತ್ತಿಗೆ ಮಠದ ಹಿರಿಯ ಯತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಭಗವದ್ಗೀತೆ ವಿಶ್ವತೋಮುಖಿ ಎಂದ್ರು. ಕೃಷ್ಣ ಜೀವನವನ್ನು ಹೇಗೆ ಎದುರಿಸಬೇಕು ಎಂಬ ಸಂದೇಶವನ್ನು ಭಗವದ್ಗೀತೆಯಲ್ಲಿ ನೀಡಿದ್ದಾನೆ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭದಲ್ಲಿ ದಾನಿ ಹಾಗು ಉದ್ಯಮಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನೂ ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿ ಹೇರಂಭಾ ಇಂಡಸ್ಟ್ರೀಸ್ ಹಾಗು ಕೆಮಿನೋ ಫಾರ್ಮಾದ ಚೇರ್ಮನ್ ಡಾ. ಕನ್ಯಾನ ಸದಾಶಿವ ಶೆಟ್ಟಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!