ಈಶ್ವನಗರದ ಬಳಿ ಇರುವ ಡೌನ್ ಟೌನ್ ಬಾರ್ ಆಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಮರ್ ಶೆಟ್ಟಿ, ಚಂದನ್.ಸಿ ಸಾಲ್ಯಾನ್, ಧನುಷ್ ಮತ್ತು ಅಜಯ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾರ್‌ನಲ್ಲಿ ಅಮರ್ ಶೆಟ್ಟಿ, ಧನುಷ್, ನಿತೇಶ್, ಸುಜನ್, ನಿನಾದ್ ಅಜಯ್ ಊಟ ಮಾಡುತ್ತಿರುವಾಗ ಚಂದನ್ ಎಂಬಾತನ ಕೈ ಅಮರ್ ಶೆಟ್ಟಿಯ ಮೈಗೆ ತಾಗಿದೆ. ಈ ಕ್ಷುಲ್ಲಕ ವಿಚಾರದಲ್ಲಿ ರಸ್ತೆಯಲ್ಲೇ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡು ಬೈದಾಡಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಗಸ್ತಿನಲ್ಲಿದ್ದ ಎ.ಎಸ್.ಐ ಮೋಹನ್ ದಾಸ್ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…