ಉಡುಪಿ ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಕರ್ಮರಕಟ್ಟೆ ಪಡೀಲುಬೆಟ್ಟುವಿನಲ್ಲಿ ದನ ಕಡಿದು ಅಕ್ರಮವಾಗಿ ಮಾಂಸ ಸಾಗಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸ್ ದಾಳಿ ನಡೆದಿದೆ.
ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪಡೀಲುಬೆಟ್ಟುವಿಗೆ ತೆರಳಿ, ಅಶ್ರಫ್ ಎಂಬಾತನಿಗೆ ಸೇರಿದ ತೋಟದಲ್ಲಿ ದನ ಕಡಿದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಗ್ರಾಮಾಂತರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಹಾಗೂ ಅವರ ತಂಡ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಮಾಂಸ ತುಂಬಿದ್ದ ಸ್ವಿಫ್ಟ್ ಡಿಸೈರ್ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆರೋಪಿಗಳಾದ ಅಶ್ರಫ್, ನವಾಜ್, ಅಪ್ತಾಬ್ ಪರಾರಿಯಾಗಿದ್ದಾರೆ. ಬಳಿಕ ಮನೆ ಪರಿಶೀಲನೆ ಮಾಡುವ ಸಂದರ್ಭ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 60 ಕೆ.ಜಿ.ಯಷ್ಟು ದನದ ಮಾಂಸ ಪತ್ತೆಯಾಗಿದ್ದು. ವಧೆಗೆಂದು ತಂದಿದ್ದ ಮತ್ತೊಂದು ದನ ತೋಟದಲ್ಲಿ ಪತ್ತೆಯಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…