ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು. ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಲಾಗಿದೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನದಂತೆ ಎಸ್‌ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…