ಕಾರು ಮತ್ತು ಅಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.
ಸ್ಕೂಟರ್ ಸವಾರ ಪುತ್ತೂರು ನಗರದ ಸಾಮೆತ್ತಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಶಶಿಕುಮಾರ್ ಗಾಯಗೊಂಡವರು. ಮಸಾಲ ಹುಡಿಯೊಂದರ ಏಜನ್ಸಿಯಲ್ಲಿ ಕೆಲಸ ಮಾಡುತ್ತಿರುವ ಶಶಿಕುಮಾರ್ ಅವರು ಮನೆಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಪೋಳ್ಯ ತಿರುವಿನಲ್ಲಿ ಹಿಂಬಾಗದಿಂದ ಆಗಮಿಸಿದ ಕಬಕ ನಿವಾಸಿ ತೌಫೀಕ್ ಎಂಬವರು ಚಲಾಯಿಸುತ್ತಿದ್ದ ಹುಂಡೈ ಕಾರು ಸ್ಕೂಟರ್‌ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಹಿತ ರಸ್ತೆಗೆ ಎಸೆಯಲ್ಪಟ್ಟ ಶಶಿಕುಮಾರ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…