ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಪಣಂಬೂರು ಸಿಗ್ನಲ್‌ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್‌ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು.
ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…