ಬೆಳ್ತಂಗಡಿ: ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿ ಯಾಗಿದೆ.
ಈ ರಸ್ತೆಯು 20 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಸುಮಾರು 50ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು, ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯಾಡಳಿತದವರು, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ, ಹೇಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…