ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ.
ಮನೆಯ ಬಳಿಯ ಶೆಡ್‌ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ. ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ ಎಂಬಾತನಾಗಿದ್ದು, ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿದ್ದಾರೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.
ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್‌ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…