ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು-ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.
ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ನಡೆದ ಘಟನೆಯಾಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…