ಪುತ್ತೂರು ತಾಲೂಕಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಕಾಸರಗೋಡಿನ ಉಕ್ಕಿನಡ್ಕದ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಕ್ಷಕ-ಶಿಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಸಂಘ ಸಭೆಯಲ್ಲಿ ಆಯ್ಕೆ ಪ್ರಕಿಯೆ ನೆರವೇರಿತು. ಉಪಾಧ್ಯಕ್ಷರಾಗಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಮತ್ತು ಪುತ್ತೂರಿನ ಅಕ್ಷಯ ಮೋಟರ್ ಮಾಲಿಕ ಶಿವಪ್ರಸಾದ್ ಸಿ. ಎಚ್ ಆಯ್ಕೆಯಾದರು.




